ಮಹಾರಾಷ್ಟ್ರದಲ್ಲಿ ಕೊರೊನಾ ಹೆಚ್ಚಳ
ಪ್ರಗತಿವಾಹಿನಿ ಸುದ್ದಿ, ಅಥಣಿ: ಮಹಾರಾಷ್ಟ್ರದ ರಾಜ್ಯದ ಗಡಿ ಜಿಲ್ಲೆಯಾದ ಸಾಂಗ್ಲಿ ನಗರದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಅಥಣಿ ಗಡಿಭಾಗದಲ್ಲಿ ರಸ್ತೆಗಳಲ್ಲಿ ಕರ್ನಾಟಕ ಸರ್ಕಾರ ಕಟ್ಟೇಚ್ಚರ ವಹಿಸುವಂತೆ ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಆಗ್ರಹಿಸಿದ್ದಾರೆ.
ಅವರು ತಮ್ಮ ನಿವಾಸದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ ಮಹಾರಾಷ್ಟ್ರದಲ್ಲಿ ಕೊವಿಡ್_೧೯ ವ್ಯಾಪಕವಾಗಿರುವುದರಿಂದ ಸಾಂಗ್ಲಿ ಜಿಲ್ಲಾಡಳಿತ ನಗರದಲ್ಲಿ ಹತ್ತು ದಿನದವರೆಗೆ ಮತ್ತೆ ಲಾಕ್‌ಡೌನ್ ಆದೇಶ ಮಾಡಿದೆ. ಸಾಂಗ್ಲಿಯಿಂದ ಅಥಣಿ ಪಟ್ಟಣಕ್ಕೆ ದಿನನಿತ್ಯ ನೂರಾರು ಜನರು ಬರುವುದರಿಂದ ಹಾಗೂ ಮಹಾರಾಷ್ಟ್ರಕ್ಕೆ ಗಡಿಹೊಂದಿರುವ ಅಥಣಿ ಗಡಿಭಾಗ ಗ್ರಾಮದಲ್ಲಿ ಬೆಳಗಾವಿ ಜಿಲ್ಲಾಡಳಿತ ಸೂಕ್ತ ಕ್ರಮಗಳನ್ನು ಜರುಗಿಸಿ ಗಡಿ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಬೇಕು. ಮಹಾರಾಷ್ಟ್ರದ ಜನರನ್ನು ಕರ್ನಾಟಕ ಗಡಿ ಒಳಗೆ ಬರದಂತೆ ನೋಡಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಕಳೆದ ಎರಡು ವಾರದಲ್ಲಿ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕು ಹರಡಿರುವ ಹಿನ್ನೆಲೆಯಲ್ಲಿ ನಮ್ಮ ರಾಜ್ಯದ ಜನ ಸಾಮಾನ್ಯರ ಆರೋಗ್ಯ ಹಿತದೃಷ್ಟಿಯಿಂದ ತುರ್ತು ಸಂದರ್ಭ ಬಿಟ್ಟು ಎಲ್ಲ ಗಡಿ ರಸ್ತೆಗಳನ್ನು ಬಂದಮಾಡಿ ಎಂದು ಆಗ್ರಹಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ