ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಅನಾರೋಗ್ಯಕ್ಕೀಡಾಗಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇತ್ತೀಚೆಗೆ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದ ಅಮಿತ್ ಶಾ ಅವರಿಗೆ ತಡ ರಾತ್ರಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇತ್ತೀಚೆ ಅಮಿತ್ ಶಾ ಪದೇ ಪದೇ ಅನಾರೋಗ್ಯಕ್ಕೀಡಾಗುತ್ತಿದ್ದು, ಶಾ ಅವರಿಗೆ ಆಗಸ್ಟ್ 2ರಂದು ಕೊರೋನಾ ಪಾಸಿಟಿವ್ ಬಂದಿತ್ತು. ಈ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಆಗಸ್ಟ್ 14ರಂದು ಕೊರೊನಾ ನೆಗೆಟಿವ್ ಬಂದಿತ್ತು. ಆಗಸ್ಟ್ 31ರಂದು ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲೇ ಚಿಕಿತ್ಸೆ ಮತ್ತು ವಿಶ್ರಾಂತಿ ಪಡೆಯುತ್ತಿದ್ದರು. ಆದರೀಗ ಅವರಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ