ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣ ಸಂಬಂಧ ಸಿಸಿಬಿ ವಶದಲ್ಲಿರುವ ನಟಿರಾಗಿಣಿ ದ್ವಿವೇದಿಯವರ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ.
ನಟಿ ರಾಗಿಣಿ ದ್ವಿವೇದಿಯವರ ಸಿಸಿಬಿ ಕಸ್ಟಡಿ ಅವಧಿ ಇನ್ನೂ ಅಂತ್ಯವಾಗದ ಹಿನ್ನಲೆಯಲ್ಲಿ ಇಂದು ಜಾಮೀನು ಅರ್ಜಿ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದಿರುವ ವಿಶೇಷ ನ್ಯಾಯಾಲಯ, ಅರ್ಜಿ ವಿಚಾರಣೆಯನ್ನು ಸೆ.16ಕ್ಕೆ ಮುಂದೂಡಿದೆ. ಹೀಗಾಗಿ ನಟಿ ರಾಗಿಣಿಗೆ ಸಧ್ಯಕ್ಕೆ ಬಿಡುಗಡೆ ಭಾಗ್ಯವಿಲ್ಲ ಎನ್ನಲಾಗಿದೆ.
ಇನ್ನು ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದ ಆರೋಪಿಗಳಾದ ನಟಿ ರಾಗಿಣಿ, ಸಂಜನಾ, ರಾಹುಲ್, ಪ್ರಶಾಂತ್ ರಾಂಕ, ಲೂಮ್ ಪೆಪ್ಪರ್, ವಿರೇನ್ ಖನ್ನಾ ಅವರ ಸಿಸಿಬಿ ಕಸ್ಟಡಿ ಅವಧಿ ಇಂದು ಅಂತ್ಯವಾಗಲಿದ್ದು, ಎಲ್ಲಾ ಆರೋಪಿಗಳು ಇಂದು 1ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರಾಗಲಿದ್ದಾರೆ. ನ್ಯಾಯಾಲಯ ಆರೋಗಿಳನ್ನು ಮತ್ತೆ ಕಸ್ಟಡಿಗೆ ವಹಿಸುತ್ತಾ ಇಲ್ಲವೇ ನ್ಯಾಯಾಂಗ ಬಂಧನಕ್ಕೆ ವಹಿಸುತ್ತಾ ಕಾದುನೋಡಬೇಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ