Latest

ಪರಪ್ಪನ ಅಗ್ರಹಾರ ಜೈಲಿಗೆ ನಟಿ ರಾಗಿಣಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದತೆ ನಟಿ ರಾಗಿಣಿ ದ್ವಿವೇದಿ ಸೇರಿದಂತೆ ಐವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಪ್ರಕರಣದ ಆರೋಪಿಗಳಾದ ನಟಿ ರಾಗಿಣಿ, ಸಂಜನಾ, ರಾಹುಲ್, ಪ್ರಶಾಂತ್ ರಾಂಕ, ಲೂಮ್ ಪೆಪ್ಪರ್, ನಯಾಜ್ ಅವರ ಸಿಸಿಬಿ ಕಸ್ಟಡಿ ಅವಧಿ ಇಂದು ಅಂತ್ಯವಾದ ಹಿನ್ನಲೆಯಲ್ಲಿ ಸಿಸಿಬಿ ಅಧಿಕಾರಿಗಳು ಎಲ್ಲಾ 6 ಆರೋಪಿಗಳನ್ನು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಿದರು.

Home add -Advt

ಈ ವೇಳೆ ನಟಿ ಸಂಜನಾ ಅವರನ್ನು ಇನ್ನಷ್ಟು ದಿನಗಳ ಕಾಲ ವಿಚಾರಣೆಗೆ ಒಳಪಡಿಸುವ ಅಗತ್ಯವಿದ್ದು, ಇನ್ನಷ್ಟು ದಿನಗಳ ಕಾಲ ಅವರನ್ನು ಸಿಸಿಬಿ ಕಸ್ಟಡಿಗೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಸಂಜನಾ ಕುರಿತ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿದೆ.

ಉಳಿದಂತೆ ನಟಿ ರಾಗಿಣಿ ಸೇರಿದಂತೆ 5 ಆರೋಪಿಗಳಿಗೆ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ. ಈ ಹಿನ್ನಲೆಯಲ್ಲಿ ನಟಿ ರಾಗಿಣಿ ಸೇರಿ ಐವರು ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ.

Related Articles

Back to top button