Kannada NewsKarnataka NewsPolitics

ಕೃಷಿ ಸಚಿವ ಬಿ.ಸಿ.ಪಾಟೀಲ ಕೆಎಲ್‌ಇ ಸಂಸ್ಥೆಗೆ ಭೇಟಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –  ಕೃಷಿ ಸಚಿವ ಬಿ.ಸಿ.ಪಾಟೀಲ ಅವರು  ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಪ್ರಧಾನ ಕಚೇರಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ  ಡಾ.ಪ್ರಭಾಕರ ಕೋರೆ ಸಚಿವರನ್ನು ಸಂಸ್ಥೆಯ ಪರವಾಗಿ ಸತ್ಕರಿಸಿದರು.
ಈ ವೇಳೆ ಮಾತನಾಡಿದ ಸಚಿವರು ಕೆಎಲ್‌ಇ ಸಂಸ್ಥೆಯು ಇಂದು ಶಿಕ್ಷಣ ಮಾತ್ರವಲ್ಲದೇ ಹಲವಾರು ಕ್ಷೇತ್ರಗಳಿಗೆ ವಿಸ್ತರಿಸಿದೆ. ಡಾ.ಪ್ರಭಾಕರ ಕೋರೆ ಹಾಗೂ ಆಡಳಿತ ಮಂಡಳಿಯ ದೂರದೃಷ್ಟಿಯ ಫಲವಾಗಿ ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರವನ್ನು ಸ್ಥಾಪಿಸುವ ಮೂಲಕ ಈ ಭಾಗದ ರೈತರ ಹಿತಾಸಕ್ತಿಗಳಿಗೆ ಸ್ಪಂದಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಡಾ.ಕೋರೆ ಮಾತನಾಡಿ ’ಕೆಎಲ್‌ಇ ಸಂಸ್ಥೆಯ ಮತ್ತಿಕೊಪ್ಪದ ಕೃಷಿ ವಿಜ್ಞಾನ ಕೇಂದ್ರವು ಅಲ್ಪಾವಧಿಯಲ್ಲಿಯೇ ಜಿಲ್ಲೆಯ ಸಾವಿರಾರು ರೈತರಿಗೆ ಅನುಕೂಲತೆಗಳನ್ನು ಕಲ್ಪಿಸಿಕೊಟ್ಟಿದೆ. ಸುಧಾರಿತ ಬೆಳೆ, ಬೀಜೋತ್ಪನ್ನ, ಮಾರಾಟ ವ್ಯವಸ್ಥೆ, ವೈeನಿಕ ಕೃಷಿ ಪದ್ಧತಿಯ ಕುರಿತು ರೈತರಿಗೆ ನಿರಂತರವಾಗಿ ತರಬೇತಿಯನ್ನು ನೀಡುತ್ತಿದೆ ಎಂದು ಮನವರಿಕೆ ಮಾಡಿಕೊಟ್ಟರು.

ತದನಂತರದಲ್ಲಿ ಉತ್ತರ ಕರ್ನಾಟಕದ ರೈತರ ಹಲವಾರು ಜ್ವಲಂತ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿದ ಡಾ.ಪ್ರಭಾಕರ ಕೋರೆ ಸರ್ಕಾರವು ರೈತರ ಭಾವನೆಗಳಿಗೆ ಸ್ಪಂದಿಸಿ ಅವರ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಸಚಿವರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಸಚೇತಕ ಹಾಗೂ ಕೆಎಲ್‌ಇ ನಿರ್ದೇಶಕ ಮಹಾಂತೇಶ ಕವಟಗಿಮಠ, ಬಸವರಾಜ ಆರ್. ಪಾಟೀಲ, ರಾಮದುರ್ಗದ ಮಾಜಿ ಶಾಸಕ ಅಶೋಕ ಪಟ್ಟಣ, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಶ್ರೀದೇವಿ ಅಂಗಡಿ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button