Latest

52 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 96,424 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 52,14,678 ಲಕ್ಷಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಮಹಾಮಾರಿಗೆ 1,174 ಜನರು ಬಲಿಯಾಗಿದ್ದಾರೆ. ಈ ವರೆಗೆ ದೇಶದಲ್ಲಿ ಕೊರೊನಾ ಸೋಂಕಿಗೆ 84,372 ಜನ ಬಲಿಯಾಗಿದ್ದಾರೆ.

ಕಳೆದ ಒಂದೇ ದಿನದಲ್ಲಿ 10,06,615 ಜನರಿಗೆ ಕೊವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ಈ ವರೆಗೆ 6,15,72,343 ಜನರಲ್ಲಿ ಕೊವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದೆ ಎಂದು ಐಸಿಎಂ ಆರ್ ತಿಳಿಸಿದೆ.

ಇನ್ನು ದೇಶದಲ್ಲಿ 10,17,754 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 41,12,552 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Home add -Advt

Related Articles

Back to top button