
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ದೆಹಲಿ ಪ್ರವಾಸ ಯಶಸ್ವಿಯಾಗಿದ್ದು, ಎರಡುವರೆ ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದಾಗಿ ಪ್ರಧಾನಿ ಮೋದಿ ಬಳಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ ಎನ್ನಲಾಗಿದೆ.
ಈ ಮೂಲಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳಿಗೆ ಸ್ವತ: ಸಿಎಂ ಬ್ರೇಕ್ ಹಾಕಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮಾತನಾಡಿದ ಸಿಎಂ ಯಡಿಯೂರಪ್ಪ, ಇನ್ನೂ ಎರಡುವರೆ ವರ್ಷ ತಾನೇ ಸಿಎಂ ಆಗಿ ಮುಂದುವರೆಯುತ್ತೇನೆ. ಮುಂದಿನ ಚುನಾವಣೆ ನನ್ನ ನೇತೃತ್ವದಲ್ಲೇ ಆಗಬೇಕು. ಕರ್ನಾಟಕದಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವ ಜವಾಬ್ದಾರಿ ನನ್ನದು ಎಂದಿದ್ದಾರೆ.
130 ಸ್ಥಾನಗಳನ್ನು ಗೆಲ್ಲಿಸಿ ಕೊಡುತ್ತೇನೆ. ನನ್ನ ಮೇಲೆ ವಿಶ್ವಾಸವಿಡಿ. ಪಕ್ಷವನ್ನು ಅಧಿಕಾರಕ್ಕೆ ತರುವ ಸಂಪೂರ್ಣ ಜವಾಬ್ದಾರಿ ನನ್ನದು ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ರಾಜ್ಯ ಬಿಜೆಪಿ ಪಾಳಯದಲ್ಲಿ ಸ್ವಪಕ್ಷಿಯ ಶಾಸಕರು ತನ್ನ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ. ತಮ್ಮ ವಿರುದ್ಧ ಮೇಲಿಂದ ಮೇಲೆ ಷಡ್ಯಂತ್ರ ನಡೆಸಲಾಗುತ್ತಿದೆ. ಪಕ್ಷ ವಿರೋಧಿ ಚಟುವಟಿಕೆ ಸಹಿಸಲಾಗದು. ನನ್ನ ವಿರುದ್ಧದ ದೂರುಗಳಿಗೆ ಕಿವಿಗೊಡದಂತೆ ಪ್ರಧಾನಿ ಬಳಿ ಹೇಳಿದ್ದಾರೆ ಎನ್ನಲಾಗಿದೆ.