Latest

ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಪತ್ತೆಯಾದ ಕೊರೊನಾ ಸೋಂಕಿತರ ಸಂಖ್ಯೆ ಎಷ್ಟು ಗೊತ್ತೇ?

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಹಾವಳಿ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 93,337 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 53,08,015ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಕಹೆ ನೀಡಿದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಮಹಾಮಾರಿಗೆ 1,247 ಜನರು ಬಲಿಯಾಗಿದ್ದಾರೆ. ಈ ಮೂಲಕ ಈ ವರೆಗೆ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 85,619ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 10,13,964 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 42,08,432 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ವಿಶ್ವದಲ್ಲಿ ಕೊರೊನಾ ಪೀಡಿತ ರಾಷ್ಟ್ರಗಳ ಪೈಕಿ ಭಾರತ ಎರಡನೇ ಸ್ಥಾನದಲ್ಲಿದ್ದು, ಅಮೆರಿಕಾ ಮೊದಲ ಸ್ಥಾನದಲ್ಲಿದೆ. ಅಮೆರಿಕಾದಲ್ಲಿ 39,68,680 ಸಕ್ರಿಯ ಪ್ರಕರಣಗಳಿವೆ. ಮೂರನೇ ಸ್ಥಾನದಲ್ಲಿರುವ ಬ್ರೆಜಿಲ್ ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 44,95,183ಕ್ಕೆ ಏರಿಕೆಯಾಗಿದ್ದು, 4,61,851 ಸೋಂಕಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button