Latest

ಪ್ರತಿಭಟನೆ ಮಧ್ಯೆಯೂ ಕೃಷಿ ಮಸೂದೆ ಅಂಗೀಕಾರ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ರಾಜ್ಯಸಭೆಯಲ್ಲಿ ಎರಡು ಕೃಷಿ ಮಸೂದೆಯನ್ನು ಅಂಗೀಕರಿಸಲಾಗಿದೆ. ರೈತರು ಮತ್ತು ಬೆಳೆಗಳ ವ್ಯಾಪಾರ, ವಾಣಿಜ್ಯ ಮಸೂದೆ 2020 (ಪ್ರಚಾರ ಮತ್ತು ಸೌಲಭ್ಯ) ಮತ್ತು ರೈತರು (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ 2020 ಮಸೂದೆಯನ್ನು ರಾಜ್ಯಸಭೆಯಲ್ಲಿ ಅಂಗೀಕರಿಸಲಾಗಿದೆ.

ಮಸೂದೆಯನ್ನು ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ಮತ್ತು ತೃಣಮೂಲ ಕಾಂಗ್ರೆಸ್, ಡಿಎಂಕೆ ಸೇರಿದಂತೆ ವಿರೋಧ ಪಕ್ಷಗಳು ಈ ತೀವ್ರ ವಿರೋಧ ವ್ಯಕ್ತಪಡಿಸಿವೆ. ದೇಶದ ಒಟ್ಟು ಜಿಡಿಪಿಗೆ ಕನಿಷ್ಠ 20% ಕೊಡುಗೆ ನೀಡುವ ರೈತರನ್ನು ಈ ಮಸೂದೆ ಗುಲಾಮರನ್ನಾಗಿ ಮಾಡುತ್ತಿದೆ. ಇದು ರೈತರ ಮರಣ ಶಾಸನವಾಗಿವೆ ಎಂದು ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಸೂದೆ ವಿರುದ್ಧ ವಿಪಕ್ಷಗಳು ಸದನದಲ್ಲಿ ಪ್ರತಿಭಟನೆಗೆ ಮುಂದಾದ ನಡುವೆಯೂ ಧ್ವನಿಮತದ ಮೂಲಕ ಮಸೂದೆಯನ್ನು ಅಂಗೀಕರಿಸಲಾಯಿತು. ವಿಪಕ್ಷಗಳ ಗದ್ದಲದ ಹಿನ್ನೆಲೆಯಲ್ಲಿ ಕಲಾಪವನ್ನು ಸೋಮವಾರ ಬೆಳಿಗ್ಗೆ 9 ಗಂಟೆವರೆಗೂ ಮುಂದೂಡಲಾಯಿತು.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button