Latest

ಅಧಿವೇಶನ ಮೊಟಕಿಗೆ ವಿಪಕ್ಷಗಳಿಂದ ಬ್ರೇಕ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಮೂರು ದಿನಗಳಿಗೆ ಅಧಿವೇಶನ ಮೊಟಕುಗೊಳಿಸುವ ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದು, 6 ದಿನಗಳ ಕಾಲ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ.

ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಕೊರೊನಾ ಸೋಂಕಿನಿಂದಾಗಿ 60ಕ್ಕೂ ಹೆಚ್ಚು ಶಾಸಕರು ಅಧಿವೇಶಕ್ಕೆ ಗೈರಾಗಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಧಿವೇಶನವನ್ನು ಮೂರು ದಿನಕ್ಕೆ ಮೊಟಕುಗೊಳಿಸಲು ಮುಂದಾಗಿತ್ತು. ಈ ಬಗ್ಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದಲ್ಲಿ ನಡೆದ ಸದನ ಕಾರ್ಯಕಲಾಪ ಸಮಿತಿ ಸಭೆಯಲ್ಲಿ ಸರ್ಕಾರ ಪ್ರಸ್ತಾಪಿಸಿದ್ದು, ಇದಕ್ಕೆ ವಿಪಕ್ಷ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

Home add -Advt

ಕೊರೊನಾ ಕಾರಣಕ್ಕಾಗಿ ಅಧಿವೇಶನವನ್ನು ನಡೆಸದಿರಲು ಸಾಧ್ಯವಿಲ್ಲ. ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಅಧಿವೇಶನವನ್ನು ನಡೆಸಬೇಕು. ರಾಜ್ಯದ ಅಭಿವೃದ್ಧಿ, ಜನರ ಹಿತದೃಷ್ಟಿಯಿಂದ ಹಲವು ವಿಧೇಯಕಗಳ ಬಗ್ಗೆ ಚರ್ಚೆ ನಡೆಸಬೇಕಿದೆ. ಹೀಗಾಗಿ 6 ದಿನಗಳ ಕಾಲವಾದರೂ ಅಧಿವೇಶನ ನಡೆಸಬೇಕು ಎಂದು ವಿಪಕ್ಷ ಸದಸ್ಯರು ಪಟ್ಟು ಹಿಡಿದರು. ವಿಪಕ್ಷಗಳ ಒತ್ತಾಯಕ್ಕೆ ಮಣಿದು 6 ದಿನಗಳ ಕಾಲ ಅಧಿವೇಶನ ನಡೆಸಲು ನಿರ್ಧರಿಸಲಾಗಿದ್ದು, ಶನಿವಾರ ಅಧಿವೇಶನ ಮುಕ್ತಾಯವಾಗಲಿದೆ.

Related Articles

Back to top button