ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ ಅಂಗಡಿ(65) ಕೊರೊನಾ ಸೋಂಕಿನಿಂದ ನಿಧನರಾಗಿರುವ ಹಿನ್ನೆಲೆಯಲ್ಲಿ ಅವರ ಪಾರ್ಥೀವ ಶರೀರವನ್ನು ಬೆಳಗಾವಿಗೆ ತೆಗೆದುಕೊಂಡು ಹೋಗಲು ವೈದ್ಯರು ಬಿಡುತ್ತಿಲ್ಲ.
ಕೊರೊನಾ ಸೋಂಕಿನಿಂದ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಸುರೇಶ್ ಅಂಗಡಿ ಚಿಕಿತ್ಸೆ ಫಲಕಾರಿಯಾಗದೇ ಇಂದು ರಾತ್ರಿ ಕೊನೆಯುಸಿರೆಳೆದಿದ್ದರು. ಹೀಗಾಗಿ ಅವರ ಪಾರ್ಥೀವಶರೀರವನ್ನು ಬೆಳಗಾವಿಗೆ ಕೊಂಡೊಯ್ಯಲು ಬಿಡುವುದಿಲ್ಲ. ಅಂತ್ಯಕ್ರಿಯೆಯನ್ನು ದೆಹಲಿಯಲ್ಲೇ ನಡೆಸುವಂತೆ ಆಸ್ಪತ್ರೆ ವೈದ್ಯರು ಪಟ್ಟು ಹಿಡಿದಿದ್ದಾರೆ.
ಈ ಹಿನ್ನೆಲೆಯಲ್ಲಿ ಸಂಸದ ಕಡಾಡಿ ಹಾಗೂ ಸಚಿವ ವಿ.ಸೋಮಣ್ಣ ಏಮ್ಸ್ ವೈದ್ಯರ ಜೊತೆ ಚರ್ಚೆ ನಡೆಸಿದ್ದಾರೆ. ಆದರೆ ಆಸ್ಪತ್ರೆ ವೈದ್ಯರು ಪಟ್ಟು ಸಡಿಲಿಸುತ್ತಿಲ್ಲ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಸುರೇಶ ಅಂಗಡಿ ಅಂತ್ಯಕ್ರಿಯೆ ದೆಹಲಿಯಲ್ಲಿ ನಡೆಯಲಿದೆ.
ದೆಹಲಿಯ ಲೋಧಿ ಎಸ್ಟೇಟ್ ಚಿತಾಗಾರದಲ್ಲಿ ನಾಳೆ ಕೊರೊನಾ ನಿಯಮದಂತೆ ಅಂತ್ಯಕ್ರಿಯೆ ನಡೆಯಲಿದ್ದು, ಕುಟುಂಬ ವರ್ಗದವರು ದೆಹಲಿಗೆ ಬರುವಂತೆ ಸೂಚಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ