ಪ್ರಗತಿವಾಹಿನಿ ಸುದ್ದಿ; ತಿರುಪತಿ: ರಾಜ್ಯದ ಭಕ್ತರ ಅನುಕೂಲಕ್ಕಾಗಿ ತಿರುಪತಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕರ್ನಾಟಕ ಭವನದ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಶಂಕು ಸ್ಥಾಪನೆ ನೆರವೇರಿಸಿದ್ದಾರೆ.
ಕಾರ್ಯಕ್ರಮದಲ್ಲಿ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳಲ್ಲದೆ ಟಿಟಿಡಿ ಚೇರ್ಮನ್ ಸುಬ್ಬಾ ರೆಡ್ಡಿ, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಗಣ್ಯರು ಹಾಜರಿದ್ದರು.
ಕರ್ನಾಟಕದಿಂದ ತೆರಳುವ ಭಕ್ತರ ವಾಸ್ತವ್ಯಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ 7.5 ಎಕರೆ ಪ್ರದೇಶದಲ್ಲಿ ಕರ್ನಾಟಕ ಭವನದ ನಾಲ್ಕು ಕಟ್ಟಗಳು ನಿರ್ಮಾಣವಾಗುತ್ತಿದ್ದು, ಸಂಪಿಗೆ, ಸೇವಂತಿಗೆ, ತಾವರೆ ಮತ್ತು ಮಲ್ಲಿಗೆ ಎಂದು ಈ ಕಟ್ಟಡಕ್ಕೆ ಹೆಸರಿಡಲಾಗುತ್ತಿದೆ. ಈ ನಾಲ್ಕು ಹೊಸ ಕಟ್ಟಡ ನಿರ್ಮಾಣ ಹೊಣೆಯನ್ನು ಟಿಟಿಡಿ ವಹಿಸಿಕೊಂಡಿದೆ.
ಇನ್ನು ಕರ್ನಾಟಕ ಭವನ ಶಂಕು ಸ್ಥಾಪನೆಗೂ ಮುನ್ನ ಸಿಎಂ ಯಡಿಯೂರಪ್ಪ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಅಲ್ಲದೇ ಶ್ರೀವಾರಿ ಬ್ರಹ್ಮೋತ್ಸವದಲ್ಲಿ ಭಾಗವಹಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ