ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೊರೊನಾ ಸೋಂಕಿತರ ಸಂಖ್ಯೆ ದೇಶಾದ್ಯಂತ ದಿನೇ ದಿನೇ ಹೆಚ್ಚುತ್ತಿದ್ದು, ಇದೀಗ ಭಾರತದಲ್ಲಿ ಸೋಂಕಿತರ ಸಂಖ್ಯೆ 58 ಲಕ್ಷ ಗಡಿ ದಾಟಿದೆ. ಕಳೆದ 24ಗಂಟೆಯಲ್ಲಿ 86,052 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 58,18,571ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,141 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 92,290ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ 9,70,116 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 47,56,165 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ ಒಂದೇ ದಿನ 14,92,409 ಜನರನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ.ಇದೂವರೆಗೂ 6,89,28,440 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ