ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕನಾಟಕ ರಾಜ್ಯದ ವಿವಿಧ ರೈತ ಸಂಘಟನೆಗಳು ದಿನಾಂಕ 28-09-2020 ರಂದು “ಕನಾಟಕ ಬಂದ್“ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ದಿನಾಂಕ 28-09-2020 ರಂದು ನಡೆಯಬೇಕಿದ್ದ ಹಲವು ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಸೋಮವಾರ (28ರಂದು) ನಡೆಯಬೇಕಿದ್ದ ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ ಹಿಂದೂಸ್ತಾನಿ ಸಂಗೀತ ಪರೀಕ್ಷೆಗಳನ್ನು ಒಂದು ದಿನ ಮುಂದೂಡಲಾಗಿದ್ದು, 29ರಂದು ನಡೆಯಲಿದೆ ಎಂದು ಪ್ರೌಢ ಶಿಕ್ಷಣ ಇಲಾಖೆಯ ಪರೀಕ್ಷಾ ಮಂಡಳಿ ನಿರ್ದೇಶಕಿ ಸುಮಂಗಲಾ ತಿಳಿಸಿದ್ದಾರೆ.
ಅದೇ ರೀತಿ, 28ರಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಯೋಜಿತ ಮಹಾವಿದ್ಯಾಲಯಗಳಲ್ಲಿ ನಡೆಯಬೇಕಿದ್ದ ಎಲ್ಲಾ ಸ್ನಾತಕ ಪದವಿ ಪರೀಕ್ಷೆಗಳನ್ನು ” ದಿನಾಂಕ 29-09-2020 ” ಕ್ಕೆ ಮೂಂದೂಡಲಾಗಿದೆ. ಪರೀಕ್ಷೆ ನಡೆಯುವ ವೇಳಾಪಟ್ಟಿಯ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಸದರಿ ವಿಷಯವನ್ನು ಎಲ್ಲಾ ವಿದ್ಯಾರ್ಥಿಗಳ ಗಮನಕ್ಕೆ ತರಲು ಕುಲಸಚಿವರು (ಮೌಲ್ಯಮಾಪನ) ಪ್ರೊ. ಎಸ್.ಎಂ . ಹುರಕಡ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ