Latest

ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮಾಜಿ ಕೇಂದ್ರ ಸಚಿವ, ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಇಂದು ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.

ಜಸ್ವಂತ್ ಸಿಂಗ್ ಅಗಲಿಕೆಗೆ ಪ್ರಧಾನಿ ಮೋದಿ ಟ್ವಿಟ್ ಮೂಲಕ ತೀವ್ರ ಸಂತಾಪ ಸೂಚಿಸಿದ್ದು, ಹಿರಿಯ ಬಿಜೆಪಿ ನಾಯಕ, ಮಾಜಿ ಸಚಿವರ ಅವರ ಅಗಲಿಕೆ ತೀವ್ರ ನೋವುಂಟು ಮಾಡಿದೆ. ಅವರು ಹಲವು ರೀತಿಯಲ್ಲಿ ದೇಶಕ್ಕೆ ತಮ್ಮ ಸೇವೆ ಸಲ್ಲಿಸಿದ್ದರು. ಆರಂಭದಲ್ಲಿ ಓರ್ವ ಸೈನಿಕನಾಗಿ ಬಳಿಕ ರಾಜಕೀಯದ ಮೂಲಕ ದೇಶಕ್ಕಾಗಿ ದುಡಿದಿದ್ದಾರೆ. ಅಟಲ್‌ ಬಿಹಾರಿ ವಾಜಪೇಯಿ ಅಧಿಕಾರಾವಧಿಯಲ್ಲಿ ಕ್ಲಿಷ್ಟಕರವಾದ ಹಣಕಾಸು, ರಕ್ಷಣಾ ಖಾತೆ ಹಾಗೂ ವಿದೇಶಾಂಗ ಖಾತೆಗಳನ್ನು ನಿಭಾಯಿಸಿದ್ದರು ಎಂದು ತಿಳಿಸಿದ್ದಾರೆ.

Home add -Advt

ಮಾಜಿ ಸಚಿವರ ನಿಧನಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Related Articles

Back to top button