Latest

ಒಂದೆಡೆ ರೈತರ ಆಕ್ರೋಶ; ಇನ್ನೊಂದೆಡೆ ಕೊರೊನಾ ಅಟ್ಟಹಾಸ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಒಂದೆಡೆ ದೇಶಾದ್ಯಂತ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ ಮುಂದುವರೆದಿದ್ದರೆ ಇನ್ನೊಂದೆಡೆ ಕೊರೊನಾ ಅಟ್ಟಹಾಸವೂ ಎಗ್ಗಿಲ್ಲದೆ ಸಾಗಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇದೀಗ 60 ಲಕ್ಷ ಗಡಿ ದಾಟಿದೆ.

ಕಳೆದ 24 ಗಂಟೆಯಲ್ಲಿ 82,170 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ ದೇಶದಲ್ಲಿ 60,74,703ಕ್ಕೆ ಏರಿಕೆಯಾಗಿದೆ.

Home add -Advt

ಕಳೆದ 24ಗಂಟೆಯಲ್ಲಿ ದೇಶದಲ್ಲಿ 1,039 ಜನರು ಮಹಾಮಾರಿಗೆ ಬಲಿಯಾಗಿದ್ದು, ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 95,542ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 9,62,640 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 50,16,521 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Related Articles

Back to top button