ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದ ಸಾರ್ವಜನಿಕ ಶಿಕ್ಷಣ ಇಲಾಖೆಗೆ ನೂತನ ಆಯುಕ್ತರನ್ನು ನೇಮಕ ಮಾಡಿ ರಾಜ್ಯಪಾಲರು ಮಂಗಳವಾರ ಆದೇಶ ಹೊರಡಿಸಿದ್ದಾರೆ.
ಐಎಎಸ್ ಅಧಿಕಾರಿ ಅನ್ಬುಕುಮಾರ ಶಿಕ್ಷಣ ಇಲಾಖೆಯ ನೂತನ ಆಯುಕ್ತರಾಗಿದ್ದಾರೆ. ಬೆಳಗಾವಿ ಸೇರಿದಂತೆ ಹಲವೆಡೆ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿದ್ದ ಅನ್ಬುಕುಮಾರ ಸಧ್ಯ ಪೋಸ್ಟಿಂಗ್ ಗೆ ಕಾಯುತ್ತಿದ್ದರು.
ಕೆ.ಜಿ.ಜಗದೀಶ್ ಅವರ ಜಾಗಕ್ಕೆ ಅನ್ಬುಕುಮಾರ ಅವರನ್ನು ನೇಮಕ ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ