ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಿರಾ ಹಾಗೂ ರಾಜರಾಜೇಶ್ವರಿ ನಗರ ಉಪಚುನಾವಣಾ ಕಾವು ರಂಗೇರಿದ್ದು, ಆಡಳಿತ ಪಕ್ಷ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ನಡುವೆ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿದೆ.
ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಕಾಂಗ್ರೆಸ್, ದಿ.ಐಎ ಎಸ್ ಅಧಿಕಾರಿ ಡಿ.ಕೆ ರವಿ ಅವರ ಪತ್ನಿ ಕುಸುಮಾ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೂಡ ಡಿ.ಕೆ ರವಿ ಪತ್ನಿ ಕುಸುಮಾ ಅವರ ಹೆಸರನ್ನು ಸೂಚಿಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ನಾಯಕ ಹನುಮಂತರಾಯಪ್ಪ ಅವರ ಪುತ್ರಿಯೂ ಆಗಿರುವ ಕುಸುಮಾ, ಉಪಚುನಾವಣೆ ಘೋಷಣೆ ಬೆನ್ನಲ್ಲೇ ತಂದೆಯ ಜೊತೆ ಆದಿಚುಂಚನಗಿರಿ ಮಠಕ್ಕೆ ತೆರಳಿ ನಿರ್ಮಾಲನಂದ ಸ್ವಾಮೀಜಿ ಭೇಟಿಯಾಗಿ ಆಶೀರ್ವಾದ ಪಡೆದಿರುವುದು ಕುತೂಹಲ ಹೆಚ್ಚಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ