Latest

ಸಿ.ಟಿ ರವಿ ರಾಜೀನಾಮೆ ಕೊಡ್ತಾರೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ

ಪ್ರಗತಿವಾಹಿನಿ ಸುದ್ದಿ; ತುಮಕೂರು: ನಮ್ಮ ಪಕ್ಷದಲ್ಲಿ ಒಬ್ಬರಿಗೆ ಒಂದೇ ಸ್ಥಾನ ನಿಯಮವಿರುವುದರಿಂದ ಸಿ.ಟಿ ರವಿ ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಒಬ್ಬರಿಗೆ ಒಂದೇ ಹುದ್ದೆ ಎಂಬ ಪಕ್ಷದ ಅಲಿಖಿತ ನಿಯಮವನ್ನು ವರಿಷ್ಠರು ಬದಲಿಸಿದ್ದಾರೆ ಎಂದು ಹೇಳುವ ಮೂಲಕ ತಮಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಹಾಗೂ ಸಚಿವ ಸ್ಥಾನ ಎರಡನ್ನೂ ನಿಭಾಯಿಸುವ ಸಾಮರ್ಥ್ಯವಿದೆ ಎಂದು ಪರೋಕ್ಷವಾಗಿ ಸಿ.ಟಿ ರವಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ನಳೀನ್ ಕುಮಾರ್ ಕಟೀಲ್, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ರಾಜೀನಾಮೆ ಪತ್ರ ಕೂಡ ರೆಡಿ ಇದೆ ಎಂದು ಸಿ.ಟಿ ರವಿಯವರೇ ಹೇಳಿದ್ದಾರೆ. ಅಲ್ಲದೆ ನಮ್ಮ ಪಕ್ಷದ ನಿಯಮದ ಪ್ರಕಾರ ಒಬ್ಬರಿಗೆ ಒಂದೇ ಹುದ್ದೆ. ಹಾಗಾಗಿ ಸಿ.ಟಿ ರವಿ ರಾಜೀನಾಮೆ ಕೊಡುತ್ತಾರೆ ಎಂದು ಹೇಳಿದ್ದಾರೆ.

Home add -Advt

ಇದೇ ವೇಳೆ ಹತ್ರಾಸ್ ಅತ್ಯಾಚಾರ ಪ್ರಕರಣದ ಬಗ್ಗೆ ಮಾತನಾಡಿದ ಕಟೀಲ್, ರೇಪ್ ಪ್ರಕರಣವನ್ನು ರಾಹುಲ್ ಗಾಂಧಿ ರಾಜಕೀಯ ಮಾಡಲು ಹೊರಟಿದ್ದಾರೆ ಎಂದು ಗುಡುಗಿದರು.

Related Articles

Back to top button