Kannada NewsKarnataka NewsLatest

ಕಾಂಗ್ರೆಸ್ ಭವನ ಜಿಲ್ಲೆಗೆ ದೊಡ್ಡ ಕೊಡುಗೆ – ಸಿದ್ದರಾಮಯ್ಯ

 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿಯಲ್ಲಿ ನಿರ್ಮಾಣವಾಗಿರುವ ಕಾಂಗ್ರೆಸ್ ಭವನ ಜಿಲ್ಲೆಗೆ ದೊಡ್ಡ ಕೊಡುಗೆ ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಬೆಳಗಾವಿಯಲ್ಲಿ ಇಂದು ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಭವನ ಉದ್ಘಾಟಿಸಿ ಮಾತನಾಡುತ್ತಿದ್ದರು.

ಸುಸಜ್ಜಿತವಾದ ಕಾಂಗ್ರೆಸ್ ಭವನ ನಿರ್ಮಾಣವಾಗಿದೆ. ನಾನು ಮತ್ತು ಡಿ.ಕೆ.ಶಿವಕುಮಾರ ಶಂಕುಸ್ಥಾಪನೆಗೂ ಬಂದಿದ್ವಿ. ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರು ನೀವು ಉದ್ಘಾಟನೆಗೆ ಬರಲೇಬೇಕು ಎಂದು ಕರೆದ್ರು. ಈಗ ಉದ್ಘಾಟನೆಯನ್ನು ಮಾಡುತ್ತಿದ್ದೇವೆ. ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ, ಸತೀಶ್ ಜಾರಕಿಹೊಳಿ ಅವರಿಗೆ, ಶಿವಕುಮಾರ ಅವರಿಗೆ, ವಿನಯ ನಾವಲಗಟ್ಟಿ ಅವರಿಗೆ ಹಾಗೂ ಜಿಲ್ಲೆಯ ಎಲ್ಲ ಮುಖಂಡರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಭವನ ಜಿಲ್ಲೆಗೆ ದೊಡ್ಡ ಕೊಡುಗೆಯಾಗಿದೆ ಎಂದು ಸಿದ್ದರಾಮಯ್ಯ ಬಣ್ಣಿಸಿದರು.

ಕೊರೋನಾ ವಿರುದ್ಧ ರಕ್ಷಣೆಗೆ ಸರಿಯಾಗಿ ಮಾಸ್ಕ್ ಧರಿಸುವಂತೆ, ಅದಕ್ಕೆ ಯಾವುದೇ ಔಷಧ ಇಲ್ಲದಿರುವುದರಿಂದ ಜನರೇ ತಮ್ಮ ರಕ್ಷಣೆ ಮಾಡಿಕೊಳ್ಳಬೇಕು ಎಂದೂ ಅವರು ಕರೆ ನೀಡಿದರು.

ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮಾತನಾಡಿ, ನಾವು ಗಾಂಧಿ ವಂಶಸ್ಥರು. ಯಾರಿಗೂ ಹೆದರುವವರಲ್ಲ. ಬಿಜೆಪಿಯ ದುಷ್ಟ ಆಡಳಿತಕ್ಕೆ ಜನ ಬೇಸತ್ತಿದ್ದಾರೆ. ಜನರಿಗೆ ರಕ್ಷಣೆ ಇಲ್ಲವಾಗಿದೆ. ಕಾಂಗ್ರೆಸ್ ಇದರ ವಿರುದ್ಧ ಹೋರಾಟ ನಡೆಸಲಿದೆ. ನಾವು ಜನರ ರಕ್ಷಣೆಗಿದ್ದೇವೆ ಎಂದು ಹೇಳಿದರು.

ಕಾಂಗ್ರೆಸ್ ಭವನವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ಮಾಜಿ ಮುಖ್ಯಮಂತ್ರಿ, ರಾಜ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಉದ್ಘಾಟಿಸಿದರು.

ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಸ್.ಆರ್.ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ, ಶಾಸಕರೂ ಕೆಪಿಸಿಸಿ ವಕ್ತಾರರೂ ಆಗಿರುವ ಲಕ್ಷ್ಮಿ ಹೆಬ್ಬಾಳಕರ್, ಅಂಜಲಿ ನಿಂಬಾಳಕರ್, ಶಾಸಕರಾದ ಗಣೇಶ ಹುಕ್ಕೇರಿ, ಮಹಾಂತೇಶ ಕೌಜಲಗಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ಮೊದಲಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ – ಕಾಂಗ್ರೆಸ್ ಭವನ ಉದ್ಘಾಟನೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button