Latest

ಮನೆಗೆ ನುಗ್ಗಿ ದಂಪತಿಯ ಬರ್ಬರ ಹತ್ಯೆ

ಪ್ರಗತಿವಾಹಿನಿ ಸುದ್ದಿ; ಕಲಬುರಗಿ: ತಡರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ದಂಪತಿಯಿಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿಯ ಕಮಲಾಪುರ ತಾಲೂಕಿನ ದಿನಸಿ ತಾಂಡಾದಲ್ಲಿ ನಡೆದಿದೆ.

ಮಾರುತಿ ದೇವಲಾ ಜಾಧವ್ (45), ಪತ್ನಿ ಶಾರದಾಬಾಯಿ (35) ಎಂಬುವವರೇ ಕೊಲೆಯಾದ ದಂಪತಿ. ದುಷ್ಕರ್ಮಿಗಳು ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

Home add -Advt

ಮೃತ ದಂಪತಿಗೆ ಆರು ಜನ ಪುತ್ರಿಯರು, ಓರ್ವ ಪುತ್ರನಿದ್ದು, ಕೆಲ ದಿನಗಳ ಹಿಂದೆ ಒಬ್ಬ ಮಗಳೊಂದಿಗೆ ಯುವಕನೋರ್ವ ಅನುಚಿತವಾಗಿ ವರ್ತಿಸಿದ್ದ. ಈ ಬಗ್ಗೆ ಯುವಕನ‌ ವಿರುದ್ಧ ಮಾರುತಿ ದೇವಲಾ ಪೊಲೀಸರಿಗೆ ದೂರು ಸಹ ನೀಡಿದ್ದ ಎನ್ನಲಾಗಿದೆ. ಇದೇ ದ್ವೇಷದಿಂದ ತಂದೆ-ತಾಯಿ ಇಬ್ಬರನ್ನೂ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಕಮಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button