Latest
ಹತ್ರಾಸ್ ಘಟನೆ ಬೆನ್ನಲ್ಲೇ ಮತ್ತೊಂದು ಘಟನೆ; ಅತ್ಯಾಚಾರ ನಡೆಸಿ ಯುವತಿಯನ್ನೇ ಕತ್ತರಿಸಿದ್ರಾ ಪಾಪಿಗಳು?

ಪ್ರಗತಿವಾಹಿನಿ ಸುದ್ದಿ; ಲಕ್ನೋ: ಹತ್ರಾಸ್ ಪ್ರಕರಣದ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನುಷ ಘಟನೆ ಬೆಳಕಿಗೆ ಬಂದಿದ್ದು, ನಾಪತ್ತೆಯಾಗಿದ್ದ ಅಪ್ರಾಪ್ತ ಯುವತಿಯ ಮೃತದೇಹ ಇದೀಗ ತುಂಡರಿಸಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಇಲ್ಲಿನ ಕಾನ್ಪುರ್ ದೇಹತ್ ಜಿಲ್ಲೆಯಲ್ಲಿ ಸೆ.26ರಂದು 15 ವರ್ಷದ ಯುವತಿ ನಾಪತ್ತೆಯಾಗಿದ್ದು, ಇದೀಗ ಆಕೆಯ ಮೃತದೇಹ ಜಮೀನಿನೊಂದರಲ್ಲಿ ಪತ್ತೆಯಾಗಿದೆ. ಹತ್ಯೆಗೂ ಮುನ್ನ ತಮ್ಮ ಮಗಳ ಮೇಲೆ ಅತ್ಯಾಚಾರನಡೆಸಿ ಬಳಿಕ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.
ಯುವತಿ ಹತ್ಯೆ ಹಿಂದೆ ಕುಟುಂಬದ ಭೂ ವಿವಾದ ಕೂಡ ಕಾರಣ ಎನ್ನಲಾಗುತ್ತಿದ್ದು, ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.




