Latest

ಅಧಿಕೃತವಾಗಿ ’ಕೈ’ ಹಿಡಿದ ಕುಸುಮಾ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದಿ.ಐಎ ಎಸ್ ಅಧಿಕಾರಿ ಡಿ.ಕೆ ರವಿ ಪತ್ನಿ ಕುಸುಮಾ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ತಂದೆ ಹನುಮಂತರಾಯಪ್ಪ ಜೊತೆ ಕೆಪಿಸಿಸಿ ಕಚೇರಿಗೆ ಆಗಮಿಸಿದ ಕುಸುಮಾ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದರು.

ಇದೇ ವೇಳೆ ಹಲವು ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿಗರೂ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವ ಡಾ.ಜಿ.ಪರಮೇಶ್ವರ ಮೊದಲಾದವರು ಉಪಸ್ಥಿತರಿದ್ದರು.

ಶಿರಾ ಹಾಗೂ ಆರ್.ಆರ್ ನಗರ ಉಪಚುನಾವಣೆ ಘೋಷಣೆಯಾಗಿದ್ದು, ಆರ್.ಆರ್ ನಗರವನ್ನು ಪ್ರತಿಷ್ಠೆ ಕಣವನ್ನಾಗಿ ಪರಿಗಣಿಸಿರುವ ಕಾಂಗ್ರೆಸ್, ದಿ.ಐಎ ಎಸ್ ಅಧಿಕಾರಿ ಡಿ.ಕೆ ರವಿ ಪತ್ನಿಯನ್ನು ಕಣಕ್ಕಿಳಿಸುವ ಸಾಧ್ಯತೆ ದಟ್ಟವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button