ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 25 ಕೋಟಿ ಮೌಲ್ಯದ 21 ಕೆ.ಜಿ ಚಿನ್ನಾಭರಣಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಶಂಶಾಬಾದ್ ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಗಲ್ಫ್ ದೇಶಗಳಿಂದ ಬಂದಿದ್ದ ಈ ಚಿನ್ನದ ಬಿಸ್ಕತ್ ಗಳನ್ನು ಯಾವುದೇ ದಾಖಲೆಗಳಿಲ್ಲದೇ ಅಕ್ರಮವಾಗಿ ಮುಂಬೈಗೆ ಸಾಗಿಸಲಾಗುತ್ತಿತ್ತು. ಏರ್ ಪೋರ್ಟ್ ನಲ್ಲಿ ಮುಂಬೈಗೆ ಹೋಗುವ ಸ್ಥಳೀಯ ಕಾರ್ಗೋ ವಿಮಾನಕ್ಕೆ ಈ ಭಾರೀ ಮೌಲ್ಯದ ಸರಕನ್ನು ಹಾಕಲಾಗಿತ್ತು. ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ತಪಾಸಣೆ ವೇಳೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 21 ಕೆ.ಜಿ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ.
ಇದರಲ್ಲಿ 2 ಕೆ.ಜಿಯಷ್ಟು ಚಿನ್ನದ ಬಿಸ್ಕತ್ಗಳಿದ್ದರೆ, ಉಳಿದ 19 ಕೆ.ಜಿ ಚಿನ್ನ ಹಾಗೂ ವಜ್ರದ ಆಭರಣಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ