ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಸಿಬಿಐ ಡಿಕೆ ಶಿವಕುಮಾರ್ ಅವರನ್ನು ಬಂಧಿಸುವ ಸಾಧ್ಯತೆಯಿದೆ.
ಇಂದು ಮುಂಜಾನೆಯಿಂದ ಡಿ.ಕೆ ಶಿವಕುಮಾರ್ ಅವರ ಬೆಂಗಳೂರು ನಿವಾಸ, ದೆಹಲಿ, ಮುಂಬೈ ಸೇರಿದಂತೆ ಡಿಕೆಶಿಗೆ ಸೇರಿದ 14 ಸ್ಥಳಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ದೆಹಲಿ, ಮುಂಬೈ ಹಾಗೂ ಬೆಂಗಳೂರು ನಿವಾಸಗಳಲ್ಲಿ 57 ಲಕ್ಷ ರೂಪಾಯಿ ಪತ್ತೆಯಾಗಿದೆ ಎನ್ನಲಾಗಿದೆ.
ಈ ನಡುವೆ ಬೆಂಗಳೂರು ಸಿಬಿಐ ಘಟಕ ಡಿ.ಕೆ ಶಿವಕುಮಾರ್ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆ ಅಡಿಯಲ್ಲಿ ಎಫ್ ಐ ಆರ್ ದಾಖಲಿಸಿದೆ.
ಈ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಡಿ.ಕೆ ಶಿವಕುಮಾರ್ ಅವರನ್ನು ವಶಕ್ಕೆ ಪಡೆದು, ಬೆಂಗಳೂರಿನ ಸಿಬಿಐ ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ