Latest

ಚುನಾವಣೆಗೂ ಸಿಬಿಐ ದಾಳಿಗೂ ಸಂಬಂಧವಿಲ್ಲ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡಿ.ಕೆ ಶಿವಕುಮಾರ್ ಅವರ ನಿವಾಸದ ಮೇಲೆ ನಡೆದಿರುವ ಸಿಬಿಐ ದಾಳಿ ರಾಜಕೀಯ ಪ್ರೇರಿತವಲ್ಲ. ಉಪಚುನಾವಣೆ ಘೋಷಣೆಯಾಗಿರುವುದಕ್ಕೂ ಸಿಬಿಐ ದಾಳಿಗೂ ಯಾವುದೇ ಸಂಬಂಧವಿಲ್ಲ ಎಂದು ಸಚಿವ.ಡಾ.ಕೆ ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ರಾಜಕೀಯ ಪ್ರೇರಿತ ದಾಳಿಯಾಗಿದ್ದರೆ ಕಾಂಗ್ರೆಸ್ ನಲ್ಲಿ ಡಿ.ಕೆ ಶಿವಕುಮಾರ್ ಗಿಂತಲೂ ದೊಡ್ಡ ನಾಯಕರಿದ್ದಾರೆ ಅವರ ಮೇಲೂ ನಡೆಯಬೇಕಿತ್ತು. ಐಟಿ, ಇ.ಡಿ, ಸಿಬಿಐ ಸ್ವಾಯತ್ತ ಸಂಸ್ಥೆಗಳು. ರಾಜಕೀಯಕ್ಕೂ ಈ ದಾಳಿಗೂ ಸಂಬಂಧವಿಲ್ಲ ಎಂದರು.

ಡಿ.ಕೆ ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆದಿರುವುದು ಇದೇ ಮೊದಲಲ್ಲ. ತನಿಖೆ ಪಾರದರ್ಶಕವಾಗಿ ನಡೆಯಲಿದೆ. ಡಿ.ಕೆ ಶಿವಕುಮಾರ್ ಪ್ರಾಮಾಣಿಕತೆ ಬಗ್ಗೆ ತಿಳಿದುಬರಲಿದೆ ಎಂದು ವ್ಯಂಗ್ಯವಾಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button