Kannada NewsLatest
ಸುರೇಶ್ ಅಂಗಡಿ ನಿವಾಸಕ್ಕೆ ರಾಜ್ಯಪಾಲರ ಭೇಟಿ; ಕುಟುಂಬಕ್ಕೆ ಸಾಂತ್ವನ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಇತ್ತೀಚೆಗೆ ನಿಧನರಾಗಿರುವ ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿದ್ದ ದಿವಂಗತ ಸುರೇಶ್ ಅಂಗಡಿ ನಿವಾಸಕ್ಕೆ ರಾಜ್ಯಪಾಲ ವಜುಭಾಯಿ ವಾಲಾ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಬೆಳಗಾವಿಯಲ್ಲಿರುವ ಸುರೇಶ್ ಅಂಗಡಿಯವರ ನಿವಾಸಕ್ಕೆ ಭೇಟಿ ನೀಡಿದ ರಾಜ್ಯಪಾಲ ವಾಜುಭಾಯಿ ವಾಲಾ ಅವರು ಸುರೇಶ್ ಅಂಗಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಈ ವೇಳೆ ದಿ.ಸುರೇಶ್ ಅಂಗಡಿ ಅವರ ತಾಯಿ ಸೋಮವ್ವ, ಪತ್ನಿ ಮಂಗಲಾ, ಮಕ್ಕಳಾದ ಶ್ರದ್ಧಾ ಹಾಗೂ ಸ್ಫೂರ್ತಿ ಮತ್ತಿತರರು ಉಪಸ್ಥಿತರಿದ್ದರು.




