ಪ್ರಗತಿವಾಹಿನಿ ಸುದ್ದಿ; ತುಮಕೂರು: ಶಿರಾ ಉಪಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಘೋಷಣೆ ಮಾಡಿದ್ದು, ದಿ.ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಅವರನ್ನು ಕಣಕ್ಕಿಳಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ದಿವಂಗತ ಶಾಸಕ ಸತ್ಯನಾರಾಯಣ ಪತ್ನಿ ಅಮ್ಮಾಜಮ್ಮ ಅವರೇ ಶಿರಾ ಜೆಡಿಎಸ್ ಅಭ್ಯರ್ಥಿ. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಹೇಳುವ ಮೂಲಕ ಟಿಕೆಟ್ ಘೋಷಣೆ ಮಾಡಿದ್ದಾರೆ.
ಇದೀಗ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಅವರ ಮಗ ಸತ್ಯಪ್ರಕಾಶ್ ಹೇಳಿಕೆ ನೀಡಿದ್ದು, ಅಮ್ಮಾಜಮ್ಮ ಅವರಿಗೆ ಕಳೆದ ಎರಡು ದಿನಗಳಿಂದ ಜ್ವರ ಇತ್ತು. ಕೊವಿಡ್ ಟೆಸ್ಟ್ ವರದಿ ಇದೀಗ ಬಂದಿದ್ದು, ಕೊರೊನಾ ಪಾಸಿಟೀವ್ ಎಂದು ದೃಢಪಟ್ಟಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ