Kannada NewsKarnataka NewsLatest

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೊರೋನಾಕ್ಕೆ ಬಲಿ

ಪ್ರಗತಿವಾಹಿನಿ ಸುದ್ದಿ, ರಾಮದುರ್ಗ – ಬಿಜೆಪಿಯ ಹಿರಿಯ ನಾಯಕ ಜಿ.ಜಿ.ಪಾಟೀಲ ಕೊರೋನಾಕ್ಕೆ ಬಲಿಯಾಗಿದ್ದಾರೆ. ಅವರಿಗೆ ಸುಮಾರು 60 ವರ್ಷ ವಯಸ್ಸಾಗಿತ್ತು.

ಜಿಲ್ಲಾ ಪಂಚಾಯಿತಿ ಮಾಜಿ  ಸದಸ್ಯರಾಗಿದ್ದ ಪಾಟೀಲ್, ಸಧ್ಯ ಬಿಜೆಪಿ ಗ್ರಾಮೀಣ ಜಿಲ್ಲಾ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಧನಲಕ್ಷ್ಮಿ ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.

8 ದಿನದಿಂದ ಕೊರೊನಾದಿಂದ ಬಳಲುತ್ತಿದ್ದ ಅವರು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. 3 ದಿನಗಳ ಹಿಂದೆ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button