ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ- ೨೦೨೦-೨೧ ನೇ ಸಾಲಿನಲ್ಲಿ ಇಲಾಖೆಯಲ್ಲಿ ಅನುಷ್ಠಾನಗೊಳ್ಳೊತ್ತಿರುವ ಕಾರ್ಯಕ್ರಮ ಯೋಜನೆಗಳ ಕುರಿತು ಬೆಂಗಳೂರಿನಲ್ಲಿ ನಡೆದ ಸಭೆಗೆ ಹಾಜರಾಗಲು ಸಾಧ್ಯವಾಗದ ಕಾರಣ ಸಚಿವೆ ಶಶಿಕಲಾ ಜೊಲ್ಲೆ ಪ್ರಯಾಣ ಮಾಡುವ ಸಂದರ್ಭದಲ್ಲಿ ಎಲ್ಲಾ ಜಿಲ್ಲೆಯ ಉಪನಿರ್ದೇಶಕರೊಂದಿಗೆ ಮೊಬೈಲ್ ಮೂಲಕ ವಿಡಿಯೋ ಸಂಭಾಷಣೆ ನಡೆಸಿ, ಅಗತ್ಯ ಸಲಹೆ ಸೂಚನೆಗಳನ್ನೂ ನೀಡಿದರು.
ರಾಷ್ಟ್ರೀಯ ಪೋಷಣ ಅಭಿಯಾನ ಅಡಿಯಲ್ಲಿ ರಾಜ್ಯದಲ್ಲಿ ಎಲ್ಲ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಗಳನ್ನು ವಿತರಿಸಲಾಗಿದೆ. ಅದರ ಬಳಕೆ ಕುರಿತು ಸಮಾಲೋಚನೆ ನಡೆಸಲಾಯಿತು. ಇಲಾಖೆಯಡಿಯಲ್ಲಿ ಬರುವ ಎಲ್ಲಾ ಕಾರ್ಯಕ್ರಮಗಳು ಹಾಗೂ ಇತರ ಮಾಹಿತಿಗಳನ್ನು ನೀಡಲಾದ ಸ್ಮಾರ್ಟ್ ಫೋನಗಳಲ್ಲೇ ಅಪ್ ಲೋಡ್ ಮಾಡಬೇಕೆಂಬ ವಿಷಯಗಳ ಕುರಿತು ಎಲ್ಲಾ ಜಿಲ್ಲೆಯ ಉಪನಿರ್ದೆಶಕರಿಗೆ ಆದೇಶಿಸಲಾಗಿದೆ.
ಈ ಮೊಬೈಲ್ (ಸಂಚಾರಿ) ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಯುಕ್ತರಾದ ಪೆದ್ದಪಯ್ಯ, ಐಸಿಡಿಎಸ್ ಜಂಟಿ ನಿರ್ದೇಶಕರಾದ ಸುರೇಖಾ ವಿಜಯಪ್ರಕಾಶ ಹಾಗೂ ಎಲ್ಲಾ ಜಿಲ್ಲೆಯ ಉಪನಿರ್ದೇಶಕರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ