Latest

ಚುನಾವಣೆ ಆಯೋಗದ ನಿರ್ದೇಶನ: 5 ಐಎಎಸ್ ಅಧಿಕಾರಿಗಳ ವರ್ಗಾವಣೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆ ಆಯೋಗದ ನಿರ್ದೇಶನದಂತೆ ರಾಜ್ಯದ ಐವರು ಐಎಎಸ್  ಅಧಿಕಾರಿಗಳನ್ನು ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದೆ. 

ಟಿ.ಕೆ.ಅನೀಲ ಕುಮಾರ ಅವರನ್ನು ಮೈಸೂರಿನ ಪ್ರಾದೇಶಿಕ ಆಯುಕ್ತರ ಹುದ್ದೆಗೆ, ಸುಭೋದ ಯಾದವ ಅವರನ್ನು ಕಲಬುರ್ಗಿ ಪ್ರಾದೇಶಿಕ ಆಯುಕ್ತರ ಹುದ್ದೆಗೆ, ಶಿವಯೋಗಿ ಕಳಸದ ಅವರನ್ನು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಹುದ್ದೆಗೆ, ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರನ್ನು ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಹುದ್ದೆಗೆ, ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರನ್ನು ಉಡುಪಿಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button