ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾದಂತಹ ಈ ಕಠಿಣ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೆಲವರ ಒತ್ತಡಕ್ಕೆ ಮಣಿದು, ನಾಲ್ಕು ಜನ ಹಣ ಸಂಪಾದಿಸಬೇಕು ಎಂಬ ಉದ್ದೇಶದಿಂದ ಶಾಲೆಗಳನ್ನು ತೆರೆಯುವುದು ಬೇಡ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಪೋಷಕರು ಶಾಲೆ ಆರಂಭಿಸುವುದು ಬೇಡ ಎಂದು ಒತ್ತಾಯಿಸುತ್ತಿದ್ದಾರೆ. ಆದರೂ ಸರ್ಕಾರ ಶಾಲೆ ತೆರೆಯುವ ಬಗ್ಗೆ ಚಿಂತನೆ ನಡೆಸುತ್ತಿರುವುದು ಸರಿಯಲ್ಲ. ವಿದ್ಯಾಗಮ ಯೋಜನೆಯಡಿ ಶಾಲೆಗೆ ಪಾಠ ಮಾಡಲು ಹೋದ 26 ಶಿಕ್ಷಕರು ಬಲಿಯಾಗಿದ್ದಾರೆ ಎಂಬ ಮಾಹಿತಿದೆ. ಈ ಬಗ್ಗೆ ಸರ್ಕಾರ ಗಮನಹರಿಸಬೇಕು ಎಂದರು.
ಜೀವ ಇದ್ದರೆ ಮುಂದೆ ಜೀವನ ನಡೆಸಬಹುದು. ಕೊರೊನಾ ಸಂದರ್ಭದಲ್ಲಿ ಶಾಲೆ ತೆರೆದು ಮಕ್ಕಳ ಜೀವದ ಜೊತೆ ಚಲ್ಲಾಟವಾಡುವುದು ಬೇಡ. ಯಾರ ಒತ್ತಡಕ್ಕೂ ಮಣಿಯದಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ನಾನು ಕೂಡ ಮನವಿ ಮಾಡುತ್ತೇನೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ