ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 73,272 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 69,79,424ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ 926 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,07,416ಕ್ಕೆ ಏರಿಕೆಯಾಗಿದೆ.
8,83,185 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 59,88,823 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ 11,64,018 ಜನರಿಗೆ ಕೊವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ಈವರೆಗೆ ದೇಶದಲ್ಲಿ 8,57,98,698 ಜನರಿಗೆ ಕೊವಿಡ್ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ