Latest

ವಿದ್ಯಾಗಮ ಎಡವಟ್ಟು ಸರಿಪಡಿಸದಿದ್ದರೆ ಅಹೋರಾತ್ರಿ ಧರಣಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನನ್ನ ಜೀವ ಹೋದರೂ ಪರವಾಗಿಲ್ಲ. ವಿದ್ಯಾಗಮ ಯೋಜನೆ ಎಡವಟ್ಟು ಸೋಮವಾರದೊಳಗೆ ಸರಿಪಡಿಸದಿದ್ದರೆ ಸರ್ಕಾರದ ಅನಾಗರಿಕ ನೀತಿ, ನಿರ್ಧಾರದ ವಿರುದ್ಧ ಅಹೋರಾತ್ರಿ ಧರಣಿ ಆರಂಭಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

ಮಕ್ಕಳಿಗೆ ಶಿಕ್ಷಣಕೊಡುವ ಸೋಗಿನಲ್ಲಿ ಶಿಕ್ಷಣ ಸಚಿವರು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿಕೆಗಳನ್ನು ನೀಡುತ್ತಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಜೀವದ ಜೊತೆ ಚಲ್ಲಾಟವಾಡುತ್ತಿದ್ದಾರೆ. ಕೊರೋನಾ ರಣಕೇಕೆ ಹಾಕುತ್ತಿರುವ ಸಂದರ್ಭದಲ್ಲಿ ವಿದ್ಯಾಗಮ ಶಿಕ್ಷಣದ ಹೆಸರಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಸಾವಿನ ಕಂದಕಕ್ಕೆ ನೂಕುತ್ತಿರುವ ರಾಜ್ಯ ಸರ್ಕಾರಕ್ಕೆ ಮನುಷ್ಯತ್ವ ಇದೆಯಾ? ಸರ್ಕಾರಕ್ಕೆ ಕನಿಷ್ಠ ಪರಿಜ್ಞಾನ ಬೇಡವೇ? ಎಂದು ಪ್ರಶ್ನಿಸಿದ್ದಾರೆ.

ವೇತನ ಹಾಗೂ ಸೌಲಭ್ಯಗಳ ಕಡಿತದ ಬೆದರಿಕೆ ಒಡ್ಡಿ ಸಾವಿನ ದವಡೆಗೆ ನೂಕಿದ ಶಿಕ್ಷಕರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಆ ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರ ಸೋಮವಾರದೊಳಗೆ ವಿದ್ಯಾಗಮ ಶಿಕ್ಷಣದ ಯಡವಟ್ಟನ್ನು ನಿಲ್ಲಿಸದಿದ್ದರೆ ವಿಧಾನಸೌಧ ಇಲ್ಲವೇ ಸ್ವಾತಂತ್ರ್ಯ ಉದ್ಯಾನದ ಬಳಿ ಅಹೋರಾತ್ರಿ ಧರಣಿ ಕೂರುವುದಾಗಿ ಎಚ್ಚರಿಸಿದ್ದಾರೆ.

ವಿದ್ಯಾಗಮ ಯೋಜನೆ; ಕೊರೊನಾಗೆ ಬಲಿಯಾದ ಶಿಕ್ಷಕರು ಎಷ್ಟು ಗೊತ್ತೇ?

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button