ಪ್ರಗತಿವಾಹಿನಿ ಸುದ್ದಿ; ಕೋಲಾರ: ಕಾಲುವೆ ಬಳಿ ಆಟವಾಡುತ್ತಿದ್ದ ಮೂವರು ಮಕ್ಕಳು ನೀರು ಪಾಲಾಗಿರುವ ಹೃದಯವಿದ್ರಾವಕ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ನಡೆದಿದೆ.
ಮೃತ ಮಕ್ಕಳನ್ನು ಮೋಹಿಕ್ (8), ಸಾದಿಕ್ (12) ಹಾಗೂ ಫಯಾಜ್ (7) ಎಂದು ಗುರುತಿಸಲಾಗಿದೆ. ಬಂಗಾರಪೇಟೆಯ ರೈಲ್ವೆ ಅಂಡರ್ ಪಾಸ್ ಬಳಿಯ ಕಾಲುವೆಯಲ್ಲಿ ಮುಳುಗಿ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ರಾತ್ರಿ ಸುರಿದ ಭಾರಿ ಮಳೆಯಿಂದ ಇಲ್ಲಿನ ಕಾಲುವೆಯಲ್ಲಿ ನೀರು ನಿಂತಿದೆ. ಬೆಳಿಗ್ಗೆ ಮಕ್ಕಳು ಆಟವಾಡಲು ಕಾಲುವೆ ಬಳಿ ತೆರಳಿದ್ದಾರೆ. ಮಕ್ಕಳು ಆಟವಾಡುತ್ತಿದ್ದಾರೆ ಎಂದು ಭಾವಿಸಿರುವ ಪೋಷಕರಿಗೆ ಕಾಲುವೆ ಬಳಿ ತೆರಳಿರುವುದು ಗೊತ್ತಾಗಿಲ್ಲ ಎನ್ನಲಾಗಿದೆ. ಆದರೀಗ ಮೂವರು ಮಕ್ಕಳು ನೀರುಪಾಲಾಗಿದ್ದಾರೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ