Latest
ಯಡಿಯೂರಪ್ಪ ಸಿಎಂ ಆಗಲು ನಾವು ಮೂವರು ಕಂಬಳಿ ಬೀಸಿದ್ದೇ ಕಾರಣ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಇಂದು ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿರಲು ನಾವೇ ಕಾರಣ ಎಂದು ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಹೇಳಿದ್ದಾರೆ.
ಅರಮನೆ ಮೈದಾನದಲ್ಲಿ ನಡೆದ ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿ ಆಗ್ರಹಿಸಿ ನಡೆದ ಸಭೆಯಲ್ಲಿ ಮಾತನಾಡಿದ ಎಂಟಿಬಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಹಾಗೂ ಯಡಿಯೂರಪ್ಪ ಸಿಎಂ ಹುದ್ದೆಯಲ್ಲಿ ಇರಲು ಕಾರಣ ನಾವು. ಕುರುಬ ಸಮುದಾಯದ ಬೆಂಬಲದಿಂದ ನಾನು, ಹೆಚ್.ವಿಶ್ವನಾಥ್, ಆರ್.ಶಂಕರ್ ನಾವು ಮೂವರು ಕಂಬಳಿ ಬೀಸಿದ್ದೇ ಕಾರಣ ಎಂದರು.
ಇಂದು ಕೆ.ಎಸ್ ಈಶ್ವರಪ್ಪ ಕೂಡ ಸಚಿವರಾಗಿದ್ದಾರೆ ಎಂದರೆ ಅದಕ್ಕೆ ನಮ್ಮ ನಾಯಕರ ಬೆಂಬಲ ಕಾರಣ. ಬಿಜೆಪಿ ಮೇಲೆ ನಂಬಿಕೆಯನ್ನಿಟ್ಟುಕೊಂಡು ನಾವು ಪಕ್ಷಕ್ಕೆ ಬಂದಿದ್ದೇವೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದ್ದಾರೆ.




