Latest

’ಕೈ’ ಕೊಟ್ಟು ’ಕಮಲ’ ಹಿಡಿದ ಖುಷ್ಬೂ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಖ್ಯಾತ ನಟಿ ಖುಷ್ಬೂ ಕಾಂಗ್ರೆಸ್ ಗೆ ರಾಜೀನಾಮೆ ನೀಡಿ, ಇದೀಗ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಸಿ.ಟಿ ರವಿ ಸಮ್ಮುಖದಲ್ಲಿ ಇಂದು ಬಿಜೆಪಿಗೆ ಸೇರ್ಪಡೆಯಾದರು.

ತಮಿಳುನಾಡು ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಖುಷ್ಬೂ ಬಿಜೆಪಿಗೆ ಸೇರಿದ್ದಾರೆ ಎನ್ನಲಾಗಿದೆ. ಇಂದು ನವದೆಹಲಿಯಲ್ಲಿ ಬಿಜೆಪಿ ಮುಖ್ಯಕಚೇರಿಯಲ್ಲಿ ಸಿ.ಟಿ ರವಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಎಲ್.ಮುರುಗನ್ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು.

Home add -Advt

ಇತ್ತೀಚೆಗೆ ನಟಿ ಖುಷ್ಬೂ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಪತ್ರ ರವಾನಿಸಿದ್ದರು. ಇದರ ಬೆನ್ನಲ್ಲೇ ಎಐಸಿಸಿ ವಕ್ತಾರೆ ಸ್ಥಾನದಿಂದ ಖುಷ್ಬೂ ಅವರನ್ನು ವಜಾಗೊಳಿಸಲಾಗಿತ್ತು. ಇದೀಗ ಖುಷ್ಬೂ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

Related Articles

Back to top button