Latest

24 ಗಂಟೆಯಲ್ಲಿ ದೇಶದಲ್ಲಿ ಪತ್ತೆಯಾದ ಕೊವಿಡ್ ಸೋಂಕಿತರು ಎಷ್ಟು?

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕಳೆದ 24 ಗಂಟೆಯಲ್ಲಿ ದೇಶದಲ್ಲಿ 55,342 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 71,75,881 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಯಲ್ಲಿ 706 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,09,856ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಇನ್ನು 8,38,729 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 62,27,296 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button