ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಆರ್.ಆರ್. ನಗರ ಉಪಚುನಾವಣೆ ತಡೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ್ದು, ಆರ್.ಆರ್.ನಗರ ಕ್ಷೇತ್ರದಲ್ಲಿ ಇದೀಗ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದೆ.
ಉಪಚುನಾವಣೆಗೆ ತಡೆಕೋರಿ ಮುನಿರಾಜುಗೌಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಈ ಮೂಲಕ ಆರ್.ಆರ್.ನಗರಕ್ಕೆ ನ.3ರಂದು ನಡೆಯಲು ಉದ್ದೇಶಿಸಿದ್ದ ಉಪಚುನಾವಣೆ ನಡೆಯಲಿದೆ.
2018ರಲ್ಲಿ ನಡೆದ ವಿಧಾನಸಭಾ ಚುನಾವಣೆಲ್ಲಿ ಆರ್.ಆರ್.ನಗರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಶಾಸಕ ಮುನಿರತ್ನ ಆಯ್ಕೆ ಅಸಿಂಧುಗೊಳಿಸಲು ಕೋರಿ ಈ ಹಿಂದೆ ಮುನಿರಾಜುಗೌಡ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಮುನಿರಾಜು ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
ಇದೀಗ ಸುಪ್ರೀಂ ಕೋರ್ಟ್ ಕೂಡ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದ್ದು, ಮುನಿರತ್ನ ಪರವಾಗಿ ತೀರ್ಪು ನೀಡಿದೆ. ಹೀಗಾಗಿ ಆರ್.ಆರ್.ನಗರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ