Latest

ಆರ್.ಆರ್.ನಗರ ಬಿಜೆಪಿ ಅಭ್ಯರ್ಥಿ ಫೈನಲ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿಯಲ್ಲಿ ಪೈಪೋಟಿಗೆ ಕಾರಣವಾಗಿದ್ದ ಆರ್.ಆರ್.ನಗರ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಬಹುತೇಕ ಫೈನಲ್ ಆಗಿದ್ದು, ಮುನಿರತ್ನ ಅವರಿಗೆ ಟಿಕೆಟ್ ನೀಡುವುದು ಖಚಿತವಾಗಿದೆ. ಆದರೆ ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.

ನಾಳೆ ಬೆಳಿಗ್ಗೆ 11 ಗಂಟೆಗೆ ಮುನಿರತ್ನ ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳುವ ಮೂಲಕ ಮುನಿರತ್ನ ಅವರಿಗೆ ಆರ್.ಆರ್.ನಗರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡುವುದು ಅಂತಿಮವಾಗಿದೆ ಎಂದಿದ್ದಾರೆ.

ಇನ್ನು ತುಳಸಿ ಮುನಿರಾಜು ಅವರು ಆರ್.ಆರ್.ನಗರದ ಟಿಕೆಟ್ ಆಕಾಂಕ್ಷಿಯಾಗಿದ್ದು ನಿಜ. ಆದರೆ ಸಮರ್ಥ ನಾಯಕರಿಗೆ ಟಿಕೆಟ್ ನೀಡುವ ಬಗ್ಗೆ ಪಕ್ಷ ನಿರ್ಧರಿಸುತದೆ. ನಾಳೆ ಬೆಳಿಗ್ಗೆ 9:30ಕ್ಕೆ ಮುಖ್ಯಮಂತ್ರಿಗಳು ತಮ್ಮನ್ನು ಭೇಟಿಯಾಗುವಂತೆ ಮುನಿರತ್ನ ಅವರಿಗೆ ಸೂಚಿಸಿದ್ದಾರೆ. ನಾಳೆ ಅಧಿಕೃತವಾಗಿ ಅಭ್ಯರ್ಥಿ ಹೆಸರು ಪ್ರಕಟವಾಗಲಿದೆ. ನಂತರ ಮುನಿರತ್ನ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಿದರು.

Home add -Advt

Related Articles

Back to top button