Latest

ಸರಕಾರ ಬೀಳಿಸಲಿಕ್ಕಲ್ಲ ಈ ಚುನಾವಣೆ : ಡಿ.ಕೆ ಶಿವಕುಮಾರ್

ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸಂದೇಶ ರವಾನಿಸಲು ಈ ಚುನಾವಣೆ

 ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಈ ಬಾರಿಯ ಉಪಚುನಾವಣೆಯನ್ನು ಬಿ.ಎಸ್ ಯಡಿಯೂರಪ್ಪ ಅವರ ರಾಜ್ಯ ಸರ್ಕಾರವನ್ನು ಅಥವಾ ಮೋದಿ ಅವರ ಕೇಂದ್ರ ಸರ್ಕಾರ ಬೀಳಿಸಲು ಎದುರಿಸುತ್ತಿಲ್ಲ. ಬದಲಿಗೆ ಎರಡೂ ಸರ್ಕಾರಗಳಿಗೆ ಸಂದೇಶ ರವಾನಿಸಲು ಈ ಚುನಾವಣೆ ಎದುರಿಸುತ್ತೇದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್ ಅವರು ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಿಷ್ಟು:
‘ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ನಮ್ಮೆಲ್ಲ ನಾಯಕರು ಸೇರಿ ವಿದ್ಯಾವಂತ, ಯುವ ಹೆಣ್ಣು ಮಗಳನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ.
ಈ ಕ್ಷೇತ್ರದ ಮತದಾರರು ಬಹಳ ವಿದ್ಯಾವಂತ, ಪ್ರಜ್ಞಾವಂತ ಹಾಗೂ ಬುದ್ಧಿವಂತರಿದ್ದಾರೆ. ಇಲ್ಲಿನ ಮತದಾರರು ಎರಡು ಬಾರಿ ಸತತವಾಗಿ ಕಾಂಗ್ರೆಸ್ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದಾರೆ. ಈ ಬಾರಿಯೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ.
ಈ ಹಿಂದೆ ಇದ್ದ ಅಭ್ಯರ್ಥಿ ಯಾಕೆ ಹೋದರು ಎಂಬ ಬಗ್ಗೆ ಈಗ ಚರ್ಚೆ ಮಾಡುವುದಿಲ್ಲ. ಮತದಾರ ಕಳೆದ ಚುನಾವಣೆಯಲ್ಲಿ ಪಕ್ಷಕ್ಕೆ ನೀಡಿದ್ದಕ್ಕಿಂತ ಹೆಚ್ಚಿನ ಮತ ನೀಡಿ ನಮ್ಮ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತಾರೆ ಎಂಬ ವಿಶ್ವಾಸವಿದೆ. ಈ ಕ್ಷೇತ್ರದ ಜನರ ನಂಬಿಕೆ ಉಳಿಸಿಕೊಂಡು ನಾವು ಕೆಲಸ ಮಾಡುತ್ತೇವೆ.’

ಸರ್ಕಾರದ ಬೆದರಿಕೆಗೆ ಬಗ್ಗಲ್ಲ

ಕೆ.ಜೆ ಹಳ್ಳಿ ಗಲಾಟೆಯಲ್ಲಿ ಕಾಂಗ್ರೆಸ್ ನವರು ಇಲ್ಲಾ. ಕಾಂಗ್ರೆಸೇತರರು ಮಾಡಿರಯವ ಗಲಾಟೆ. ಬಿಜೆಪಿ ಸರ್ಕಾರ ಹೆದರಿಸಿ ಬೆದರಿಸಿ ರಾತ್ರೋ ರಾತ್ರಿ ಕಾಂಗ್ರೆಸ್ ನವರ ಹೆಸರು ಸೇರಿಸಿದ್ದಾರೆ.
ನಮ್ಮನ್ನ ಬೆದರಿಸುವ ತ‌ಂತ್ರ ಮಾಡುತ್ತಿದ್ದಾರೆ. ಪರಮೇಶ್ವರ ಅವರನ್ನ ಕರೆದು ಸಿಬಿಐ ತನಿಖೆ ಮಾಡಿದೆ‌. ನಮ್ಮ ಇಬ್ಬರು ಶಾಸಕರನ್ನು ನಿನ್ನೆ ತನಿಖೆ ಮಾಡಿದ್ದಾರೆ. ಈ ಬೆದರಿಕೆಗೆಲ್ಲಾ ನಾವು ಬಗ್ಗಲ್ಲ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button