Latest

1,11,266 ಜನ ಕೊರೊನಾಕ್ಕೆ ಬಲಿ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಹಾವಳಿ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 67,708 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 73,07,098 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 680 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,11,266ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 8,12,390 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 63,83,442 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆ 11,36,183 ಜನರಿಗೆ ಕೊವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ದೇಶದಲ್ಲಿ ಈವರೆಗೆ 9,12,26,305 ಜನರನ್ನು ಕೊವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ ಎಂದು ಐಸಿಎಂ ಆರ್ ತಿಳಿಸಿದೆ.

Home add -Advt

Related Articles

Back to top button