Latest
ಶಿರಸಿ ಬಳಿ ಕೊಚ್ಚಿಹೋದ ಕಾರಿನಲ್ಲಿ ಯುವತಿ ಸೇರಿ ಮೂವರ ಸಾವು – ವಿಡಿಯೋ ಸಹಿತ ವರದಿ

ಪ್ರಗತಿವಾಹಿನಿ ಸುದ್ದಿ, ಶಿರಸಿ – ಕಾರಿನ ನಿಯಂತ್ರಣ ತಪ್ಪಿ ಉಂಚಳ್ಳಿ ಜಲತಾಪಕ್ಕೆ ಹೋಗಿ ವಾಪಾಸ್ ಬರುತ್ತಿದ್ದ ಇಬ್ಬರು ಯುವಕರು ಹಾಗೂ ಓರ್ವ ಯುವತಿ ಸೇರಿ ಒಟ್ಟೂ ಮೂವರು ಕಾರಿನ ಸಮೇತ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಕೊಡ್ನಮನೆಯಲ್ಲಿ ನಡೆದಿದೆ.

ಬುಧವಾರ ಸಂಜೆಯ ವೇಳೆಗೆ ಘಟನೆ ಜರುಗಿದ್ದು, ಗುರವಾರ ಮಧ್ಯಾಹ್ನ ಘಟನೆ ಬೆಳಕಿಗೆ ಬಂದಿದೆ. ಕಾರಿಗೆ ಧಾರವಾಡದ ನೊಂದಣಿ ಸಂಖ್ಯೆಯಿದ್ದು, ಹುಬ್ಬಳ್ಳಿಯ ಕೇಶ್ವಾಪುರದವರು ಎನ್ನಲಾಗಿದೆ.ಮೂವರೂ ೨೫ ವರ್ಷದ ಒಳಗಿನವರಾಗಿದ್ದು, ಸಿದ್ದಾಪುರದ ಉಂಚಳ್ಳಿ ಜಲತಾಪಕ್ಕೆ ಪ್ರವಾಸಕ್ಕೆ ತೆರಳಿದ್ದರು ಎನ್ನಲಾಗಿದೆ. ಪ್ರವಾಸದಿಂದ ಹಿಂತಿರುಗಿ ಬರುವಾಗ ಕೋಡ್ನಮನೆ ಸಮೀಪದ ತಿರುವಿನಲ್ಲಿ ಆಯತಪ್ಪಿ ಕೋಡ್ನಮನೆ ಹೊಳೆಗೆ ಕಾರು ಬಿದ್ದಿದ್ದು, ನೀರಿನ ರಭಸಕ್ಕೆ 100 ಮೀ. ತೆಲಿಕೊಂಡು ಹೋಗಿದೆ.
ಗುರವಾರ ಸ್ಥಳೀಯರು ಹೊಳೆಯಲ್ಲಿ ಕಾರನ್ನು ಗಮನಿಸಿದ್ದು, ಕಾರಿನಿಂದ ಮೂವರ ಮೃತದೇಹವನ್ನು ಹೊರತೆಗೆಯಲಾಗಿದೆ. ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಇನ್ನೂ ಹೆಚ್ಚಿನ ವಿವರ ತಿಳಿದು ಬರಬೇಕಿದೆ.
ಕಾರಿನಲ್ಲಿ ಇನ್ನೂ ಓರ್ವ ಯುವತಿ ಇದ್ದಳೆಂದು ಹೇಳಲಾಗಿದ್ದು, ಆಕೆಗಾಗಿ ಹುಡುಕಾಟ ನಡೆದಿದೆ.
ಪ್ರಗತಿವಾಹಿನಿ ಈ ಮೊದಲು ಪ್ರಕಟಿಸಿದ್ದ ಸುದ್ದಿ ಕ್ಲಿಕ್ ಮಾಡಿ-




