Latest

ಹಿರಿಯ ಐಪಿಎಸ್ ಅಧಿಕಾರಿ ಕೊವಿಡ್ ಗೆ ಬಲಿ

ಪ್ರಗತಿವಾಹಿನಿ ಸುದ್ದಿ; ಪಾಟ್ನಾ; ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಬಿಹಾರದಲ್ಲಿ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ಮಹಾಮಾರಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಬಿಹಾರದ ಪುರ್ನಿಯಾದಲ್ಲಿ ಐಜಿಯಾಗಿ ಸೇವೆ ಸಲ್ಲಿಸುತ್ತಿದ್ದ ಬಿನೋದ್ ಕುಮಾರ್ ಕೊವಿಡ್ ಸೋಂಕಿಗೆ ಬಲಿಯಾಗಿದ್ದಾರೆ.

ಕಳೆದ ಮೂರು ದಿನಗಳ ಹಿಂದೆ ಬಿನೋದ್ ಅವರಿಗೆ ಕೊವಿಡ್ ಪಾಸಿಟಿವ್ ಇರುವುದು ಗೊತಾಗಿತ್ತು. ಈ ಹಿನ್ನೆಲೆಯಲ್ಲಿ ಪಾಟ್ನಾದ ಏಮ್ಸ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಬಿನೋದ್ ಕುಮಾರ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

 

Related Articles

Back to top button