ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಅ.19ರಂದು ಮತ್ತೊಂದು ಹಂತದಲ್ಲಿ ವಾಯುಭಾರ ಕುಸಿತವುಂಟಾಗಲಿದ್ದು, ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಪರಿಣಾಮ ಅ.20 ಹಾಗೂ 21ರಂದು ಉತ್ತರ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಅಲ್ಲದೇ ಮುಂದಿನ 24 ಗಂಟೆಗಳಲ್ಲಿ ಉತ್ತರ ಮಹಾರಾಷ್ಟ್ರ, ದಕ್ಷಿಣ ಕರಾವಳಿ ಸಮೀಪ ಚಂಡಮಾರುತ ಬೀಸುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಕಳೆದ ಒಂದು ವಾರದಿಂದ ಸುರಿದ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕ ಭಾಗದ ಜಲ್ಲೆಗಳು ತತ್ತರಿಸಿದ್ದು, ಮಳೆ ನಿಂತರೂ ಪ್ರವಾಹ ನಿಂತಿಲ್ಲ. ಇದರ ಬೆನ್ನಲ್ಲೇ ಈಗ ನಾಳೆಯಿಂದ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ