ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರಿಂದ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಯಲ್ಲಿ ಇತಿಹಾಸ ನಿರ್ಮಾಣ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಗ್ರಾಮೀಣ ವಿಧಾನಸಭಾ ಕ್ಷೇತ್ರದ ಇತಿಹಾಸದಲ್ಲೇ ಕಂಡು ಕೇಳರಿಯದಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ನಿತ್ಯವೂ ಒಂದಿಲ್ಲೊಂದು ಅಭಿವೃದ್ಧಿ ಕಾಮಗಾರಿಗಳು ಕ್ಷೇತ್ರದ ಒಂದಿಲ್ಲೊಂದು ಕಡೆ ನಡೆಯುತ್ತಲೇ ಇವೆ. ಕೊರೋನಾ ಇರಲಿ, ಪ್ರವಾಹ ಬರಲಿ, ಚುನಾವಣೆ ನಡೆಯುತ್ತಿರಲಿ. ಅಭಿವೃದ್ಧಿ ಕಾಮಗಾರಿಗೆ ಮಾತ್ರ ತಡೆ ಎನ್ನುವುದಿಲ್ಲ. ಅದು ನಿರಂತರ ಪ್ರಕ್ರಿಯೆಯಾಗಿದೆ ಕ್ಷೇತ್ರದಲ್ಲಿ.
ರಸ್ತೆಗಳ ಅಭಿವೃದ್ಧಿ –
ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಾಳೇಕುಂದ್ರಿ ಬಿ ಕೆ ಗ್ರಾಮದ ಮಾರುತಿ ಗಲ್ಲಿಯಲ್ಲಿ ಭಾನುವಾರ ಒಟ್ಟು 15 ಲಕ್ಷ ರೂ.ಗಳ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ ನೀಡಿದರು.
ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಅನುದಾನದಲ್ಲಿ ಕಾಂಕ್ರೀಟ್ ರಸ್ತೆಯ ಕಾಮಗಾರಿಗಳಿಗೆ ಅಧಿಕೃತವಾಗಿ ಚಾಲನೆಯನ್ನು ನೀಡಲಾಯಿತು.
ರಸ್ತೆಯ ಕಾಮಗಾರಿಗಳು ಒಳ್ಳೆಯ ಗುಣಮಟ್ಟದಿಂದ ಕೂಡಿರಬೇಕು ಹಾಗೂ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕೆಂದು ಗುತ್ತಿಗೆದಾರರಿಗೆ ಲಕ್ಷ್ಮಿ ಹೆಬ್ಬಾಳಕರ್ ಸೂಚನೆಯನ್ನು ನೀಡಿದರು.
ಕ್ಷೇತ್ರದಲ್ಲಿ ಎಲ್ಲ ಅಭಿವೃದ್ಧಿಯ ಕೆಲಸಗಳು ಹಂತ ಹಂತವಾಗಿ ಜನರ, ಪ್ರೀತಿ, ಪ್ರೋತ್ಸಾಹಗಳ ಮೂಲಕ ನಡೆಯುತ್ತಿವೆ. ಇನ್ನೂ ಹೆಚ್ಚಿನ ಅಭಿವೃದ್ಧಿಯ ಕೆಲಸಗಳನ್ನು ಹೊತ್ತು ತರುವ ಆಶಯ ಹೊಂದಿದ್ದೇನೆ. ಜನರ ಮುಖದಲ್ಲಿ ನಗು ಕಂಡರೆ ಅದಕ್ಕಿಂತ ಖುಷಿಯ ಸಂಗತಿ ನನಗೆ ಬೇರೆ ಇಲ್ಲ ಎಂದು ಹೆಬ್ಬಾಳಕರ್ ಹೇಳಿದರು.
ರಸ್ತೆಯ ಕಾಮಗಾರಿಯ ಚಾಲನೆಯ ಸಂದರ್ಭದಲ್ಲಿ ಗ್ರಾಮದ ಹಿರಿಯರು, ತಾಲೂಕ ಪಂಚಾಯತ್ ಅಧ್ಯಕ್ಷ ಶಂಕರಗೌಡ ಪಾಟೀಲ, ಪಂಚಾಯತ್ ಸದಸ್ಯೆ ತಬ್ಸುಮ್ ಮುಲ್ಲಾ, ನೂರ್ ಅಹ್ಮದ್ ಮುಲ್ಲಾ, ಅಪ್ಜಲ್ ಜಮಾದಾರ, ಜಮೀಲ್, ಪರಲೋಕ್ ಪಾಟೀಲ, ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ