ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಉಪಮುಖ್ಯಮಂತ್ರಿ ಮತ್ತು ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಅವರ ಪುತ್ರ ಡಾ.ಗೋಪಾಲ ಕಾರಜೋಳ (45) ಕೊರೋನಾದಿಂದ ಬಳಲುತ್ತಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಕಳೆದ 23 ದಿನದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ವೆಂಟಿಲೇಟರ್ ಅಳವಡಿಸಲಾಗಿತ್ತು. ಇಂದು ಸಂಜೆ ಹೆಚ್ಚಿನ ಚಿಕಿತ್ಸೆಗೆ ವಿಶೇಷ ವಿಮಾನದ ಮೂಲಕ ಹೈದರಾಬಾದ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಗೋವಿಂದ ಕಾರಜೋಳ ಅವರು ಸೇರಿದಂತೆ ಕುಟುಂಬದ 8 ಜನರಿಗೆ ಕೊರೋನಾ ಸೋಂಕು ತಗುಲಿತ್ತು. ಅವರ ಪತ್ನಿ ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಈಚೆಗೆ ಡಿಸ್ಚಾರ್ಜ್ ಆಗಿದ್ದಾರೆ.
ಕೊರೋನಾ ಇಡೀ ಕುಂಟುಬಕ್ಕೆ ತಗುಲಿರುವುದರಿಂದ ಕಾರಜೋಳ ಅವರು ಸ್ವಂತ ಜಿಲ್ಲೆ ಮತ್ತು ತಮ್ಮ ಉಸ್ತುವಾರಿ ಜಿಲ್ಲೆಗಳಿಗೆ ಪ್ರವಾಹದ ಸಂದರ್ಭದಲ್ಲೂ ಪ್ರವಾಸ ಮಾಡಲು ಸಾಧ್ಯವಾಗಿಲ್ಲ. ಹಾಗಾಗಿ ಅವರು ತಮ್ಮನ್ನು ಕ್ಷಣಿಸುವಂತೆ ಮನವಿ ಮಾಡಿದ್ದಲ್ಲದೆ, ಪ್ರವಾಹ ಸಂತ್ರಸ್ತರಿಗೆ ಎಲ್ಲ ಸಹಾಯ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಸತತವಾಗಿ ಸಂಪರ್ಕದಲ್ಲಿದ್ದೇನೆ ಎಂದು ತಿಳಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಹೇಳಿಕೆ ನೀಡಿದ್ದು, ಮಗನ ಆರೋಗ್ಯ ಸ್ಥಿತಿ ಗಂಭೀರವಾಗಿರುವುದರಿಂದ ಕಾರಜೋಳ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಲು ಸಾಧ್ಯವಾಗಿಲ್ಲ ಎಂದಿದ್ದಾರೆ.
ಸಂಬಂಧಿಸಿದ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ –
ಕೊವಿಡ್ ಹಿನ್ನೆಲೆಯಲ್ಲಿ ಜಿಲ್ಲಾ ಪ್ರವಾಸ ಸಾಧ್ಯವಿಲ್ಲ ಎಂದ ಡಿಸಿಎಂ ಕಾರಜೋಳ
ಡಿಸಿಎಂ ಗೋವಿಂದ್ ಕಾರಜೋಳ ಅವರಿಗೂ ಕೊರೋನಾ, ಆಸ್ಪತ್ರೆಗೆ ದಾಖಲು
ಪ್ರವಾಹ ಎದುರಿಸಲು ಸಜ್ಜಾಗಿ ಎಂದ ಡಿಸಿಎಂ ಕಾರಜೋಳ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ