
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರಲ್ಲೇ ನಕಲಿ ಫೇಸ್ ಬುಕ್ ಅಕೌಂಟ್ ಸೃಷ್ಟಿಸಿ ವಂಚನೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೂವರು ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರಲ್ಲಿ ಕಿಡಿಗೇಡಿಗಳು ನಕಲಿ ಫೇಸ್ ಬುಕ್ ಅಕೌಂಟ್ ಸೃಷ್ಟಿಸಿದ್ದಾರೆ. ಈ ಕುರಿತು ಸಿಐಡಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹಿರಿಯ ಪೊಲೀಸ್ ಅಧಿಕಾರಿ ಪಿ ಹರೀಶೇಖರನ್, ಡಿವೈ ಎಸ್ ಪಿ ಪ್ರಕಾಶ್ ರಾಠೋಡ್ ಹಾಗೂ ಸಿಐಡಿ ಡಿವೈ ಎಸ್ ಪಿ ಹುಮಾಯೂನ್ ನಾಗ್ತೆ ಅವರ ಹೆಸರಲ್ಲಿ ನಕಲಿ ಅಕೌಂಟ್ ಸೃಷ್ಠಿಸಿದ್ದರು. ಪೊಲೀಸ್ ಅಧಿಕಾರಿಗಳ ಸ್ನೇಹಿತರಿಗೆ ಮೆಸೇಜ್ ಮಾಡಿ ಗೂಗಲ್ ಪೇ, ಪೇಟಿಟಿಎಂ ಮಾಡಲು ಹೇಳುತ್ತಿದ್ದರು ಎನ್ನಲಾಗಿದೆ.