ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೋಟೆಲ್ ಒಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆಯೇ ಹೋಟೆಲ್ ಹೊತ್ತಿ ಉರಿದಿದೆ.
ಬೆಂಗಳೂರಿನ ಬಸವನಗುಡಿಯ ಗಾಂಧಿ ಬಜಾರ್ ನಲ್ಲಿರುವ ದಾವಣಗೆರೆ ಬೆಣ್ಣೆ ದೋಸೆ ಹೋಟೆಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಣ್ಣೆ ದೋಸೆ ಸವಿಯಲೆಂದು ಬಂದಿದ್ದ ಗ್ರಾಹಕರು ದಿಕ್ಕಾಪಾಲಿಗಿ ಓಡಿದ್ದಾರೆ.
ನೋಡ ನೋಡುತ್ತಿದ್ದಂತೆಯೇ ಹೋಟೆಲ್ ತುಂಬೆಲ್ಲ ಬೆಂಕಿಯ ಕೆನ್ನಾಲಿಗೆ ಅವರಿಸಿಕೊಂಡಿದ್ದು, ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ