Latest

ಮಾಜಿ ಸಚಿವೆ, ನಟಿ ಉಮಾಶ್ರೀ ಮನೆಯಲ್ಲಿ ಕಳ್ಳತನ

ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಮಾಜಿ ಸಚಿವೆ, ಹಿರಿಯ ನಟಿ ಉಮಾಶ್ರೀ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ಅಪಾರ ಪ್ರಮಾಣದ ವಸ್ತು ಹಾಗೂ ಹಣ ಕದ್ದೊಯ್ದಿದ್ದಾರೆ ಎನ್ನಲಾಗಿದೆ.

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ವಿದ್ಯಾನಗರದಲ್ಲಿನ ಉಮಾಶ್ರೀ ನಿವಾಸದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ. ಸ್ಥಳಕ್ಕೆ ಬನಹಟ್ಟಿ ಸಿಪಿಐ ಕರುಣೇಶಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

Related Articles

Back to top button